ಬೆಳಗಾವಿ:ಹುಕ್ಕೇರಿ ಗ್ರಾಮ ಪಂಚಾಯತ ಅಧ್ಯಕ್ಷ 15 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ತವರು ಜಿಲ್ಲೆ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ ಹಾಗೂ ಸಚಿವ ಸತೀಶ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಸ್ಸಾಪುರ ಗ್ರಾಮ ಇದು.
ಬಸ್ಸಾಪುರ ಗ್ರಾಪಂ ಅಧ್ಯಕ್ಷ ಭೀಮಶಿ ಕಾಲಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ. ಬಾಲ್ಯ ವಿವಾಹ ಮಾಡಿಕೊಂಡ ಗ್ರಾಪಂ ಅಧ್ಯಕ್ಷ ಭೀಮಶಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. 2023 ನವೆಂಬರ್ 5 ರಂದು ಅಪ್ರಾಪ್ತ ಜೊತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ.
ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಗ್ರಾಪಂ ಅಧ್ಯಕ್ಷ ಭೀಮಶಿ ಕಳ್ಳಾಟ ನಡೆಸುತ್ತಿದ್ದಾನೆ. ದೂರು ಬಂದ ತಕ್ಷಣವೇ ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಸಲ ಮಕ್ಕಳ ರಕ್ಷಣಾ ತಂಡ ಹೋಗಿದೆ.
ವರದಿ.ನಾಗನಗೌಡ ಶಂ ಪಾಟೀಲ








