ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ

19 Feb 2026
ರಾಜ್ಯ

ಬೆಂಗಳೂರು:ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ನೌಕರರು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹಾಗೆಯೇ, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದ್ದಾರೆ. ಇಂದು ಸಂಜೆ 4 ಗಂಟೆಯವರೆಗೆ ತಮ್ಮ ಬೇಡಿಕೆ ಈಡೇರಿಕೆಯಾಗದಿದ್ದಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೌಕರರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.


ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ಕಡೆಗಳಲ್ಲಿ ಬಿಎಂಟಿಸಿ, ಕೆಎಸ್‌ಆರ್ ಟಿಸಿ ಮತ್ತು ಇತರ ನಿಗಮಗಳ ಬಸ್ ಸಂಚಾರ ಎಂದಿನಂತಿದ್ದು, ಪ್ರಯಾಣಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗಿರುವುದು ವರದಿಯಾಗಿಲ್ಲ.


26 ತಿಂಗಳ ಹಿಂಬಾಕಿ ನೀಡಲು ಸಿದ್ದ


ಇದರ ನಡುವೆಯೇ ರಾಜ್ಯ ಸರ್ಕಾರವು ನೌಕರರ 26 ತಿಂಗಳ ಹಿಂಬಾಕಿ ನೀಡಲು ಸಿದ್ದವಾಗಿದ್ದು, ಈ ಪ್ರಸ್ತಾವನೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಶುಕ್ರವಾರದಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ತೀವ್ರ ತರದ ಹೋರಾಟ ನಡೆಸಲು ಮುಂದಾಗಿದೆ.


ಇಂದು ಸಂಜೆಯವರೆಗೆ ರಾಜ್ಯ ಸರ್ಕಾರ ತಮ್ಮ ಎರಡೂ ಬೇಡಿಕೆಗಳ ಈಡೇರಿಕೆಯ ಬಗ್ಗೆ ತೀರ್ಮಾನ ಕೈಗೊಳ್ಳಬೇಕು, ಇಲ್ಲದಿದ್ದಲ್ಲಿ ಸಂಜೆ ಸಭೆ ನಡೆಸಿ ಮುಂದಿನ ಹೋರಾಟದ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ಕಡೆಗಳಲ್ಲಿ ಬಿಎಂಟಿಸಿ, ಕೆಎಸ್‌ಆರ್ ಟಿಸಿ ಮತ್ತು ಇತರ ನಿಗಮಗಳ ಬಸ್ ಸಂಚಾರ ಎಂದಿನಂತಿದ್ದು, ಪ್ರಯಾಣಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗಿರುವುದು ವರದಿಯಾಗಿಲ್ಲ.


26 ತಿಂಗಳ ಹಿಂಬಾಕಿ ನೀಡಲು ಸಿದ್ದ


ಇದರ ನಡುವೆಯೇ ರಾಜ್ಯ ಸರ್ಕಾರವು ನೌಕರರ 26 ತಿಂಗಳ ಹಿಂಬಾಕಿ ನೀಡಲು ಸಿದ್ದವಾಗಿದ್ದು, ಈ ಪ್ರಸ್ತಾವನೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಶುಕ್ರವಾರದಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ತೀವ್ರ ತರದ ಹೋರಾಟ ನಡೆಸಲು ಮುಂದಾಗಿದೆ.


ಇಂದು ಸಂಜೆಯವರೆಗೆ ರಾಜ್ಯ ಸರ್ಕಾರ ತಮ್ಮ ಎರಡೂ ಬೇಡಿಕೆಗಳ ಈಡೇರಿಕೆಯ ಬಗ್ಗೆ ತೀರ್ಮಾನ ಕೈಗೊಳ್ಳಬೇಕು, ಇಲ್ಲದಿದ್ದಲ್ಲಿ ಸಂಜೆ ಸಭೆ ನಡೆಸಿ ಮುಂದಿನ ಹೋರಾಟದ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಈ ಹಿನ್ನೆಲೆಯಲ್ಲಿ ಶುಕ್ರವಾರದಿಂದ ರಾಜ್ಯಾದಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ತಮ್ಮ ಹೋರಾಟವನ್ನು ತೀವ್ರತರವಾಗಿ ನಡೆಸಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ ಎನ್ನಲಾಗಿದೆ. ಇದರಿಂದ ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಬಿಕ್ಕಟ್ಟು ಮುಂದುವರೆದಿದ್ದು, ಲಕ್ಷಾಂತರ ಪ್ರಯಾಣಿಕರು ಪರದಾಡುವ ಸಾಧ್ಯತೆಗಳಿವೆ.


ಸಾರಿಗೆ ನೌಕರರು ತಮ್ಮ 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡಲು ಒತ್ತಾಯಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಪ್ರಸ್ತುತ ಇರುವ ಸಂಪನ್ಮೂಲದ ಆಧಾರದ ಮೇಲೆ 26 ತಿಂಗಳ ಹಿಂಬಾಕಿ ನೀಡಲು ಮುಂದಾಗಿದೆ. ಆದರೆ, ಇದನ್ನು ನೌಕರರು ತಿರಸ್ಕರಿಸಿದ್ದು, ಸಂಪೂರ್ಣ ಹಿಂಬಾಕಿ ನೀಡಬೇಕೆಂದು ಆಗ್ರಹಿಸಿದ್ದಾರೆ.


ನಾಳೆಯಿಂದ ಬಸ್ ಸಂಚಾರ ಸ್ಥಗಿತ ಸಾಧ್ಯತೆ !


ಇಂದು ಸಂಜೆಯವರೆಗೆ ರಾಜ್ಯ ಸರ್ಕಾರಕ್ಕೆ ಸಾರಿಗೆ ನೌಕರರು ಗಡುವು ನೀಡಿದೆ. ಆದರೆ, ಅದರೊಳಗೆ ರಾಜ್ಯ ಸರ್ಕಾರ ನೌಕರರ ಸಮಸ್ಯೆಗೆ ಸ್ಪಂದಿಸುವ ಸಾಧ್ಯತೆಗಳು ತೀರಾ ವಿರಳವಾಗಿದೆ. ಆದ್ದರಿಂದ ನಾಳೆಯಿಂದ ರಾಜ್ಯದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗುವ ಸಾಧ್ಯತೆಗಳು ಹೆಚ್ಚಾಗಿವೆ.


ನಾವು ಕಷ್ಟದಲ್ಲಿ ದುಡಿಯುವ ವರ್ಗ, ನಮ್ಮ ದುಡಿಮೆಗೆ ತಕ್ಕ ಪ್ರತಿಫಲವನ್ನು ಕೇಳುತ್ತಿದ್ದೇವೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಜಂಟಿ ಕ್ರಿಯಾ ಸಮಿತಿ ನಾಯಕರು ಸ್ಪಷ್ಟಪಡಿಸಿದ್ದಾರೆ.


ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, 26 ತಿಂಗಳ ಹಿಂಬಾಕಿ ನೀಡಲು ನಿರ್ಧರಿಸಲಾಗಿದೆ. ನೌಕರರು ಇದರಿಂದ ಸಂತೋಷಪಡಬೇಕು ಮತ್ತು ಸರ್ಕಾರದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 38 ತಿಂಗಳು ಕೇಳಿದ್ದರು, 26 ತಿಂಗಳು ಕೊಟ್ಟಿದ್ದೇವೆ. ಸದ್ಯ ಅಷ್ಟು ಕೊಟ್ಟಿದ್ದಾರಲ್ಲ ಎಂದು ಸಂತೋಷಪಡಬೇಕು. ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ. ದಯವಿಟ್ಟು ಸಾರಿಗೆ ನೌಕರರೆಲ್ಲ ಸಹಕಾರ ಮಾಡಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದರು.


ಆದರೆ, ಸಾರಿಗೆ ನೌಕರರ ಸಂಘವು ಸರ್ಕಾರದ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮುಂದುವರಿಸಲು ನಿರ್ಧರಿಸಿದೆ. ಇಂದಿನ ಸಂಜೆ ಸಭೆಯ ನಂತರ ಬಸ್ ಸಂಚಾರದ ಭವಿಷ್ಯ ನಿರ್ಧಾರವಾಗಲಿದೆ.

ಸಾರಿಗೆ ನೌಕರರು ಇಂದು ಬೆಂಗಳೂರು ಚಲೋ ಮುಷ್ಕರ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿ ಯಾವುದೇ ರೀತಿಯಲ್ಲಿ ಬಸ್ ಸಂಚಾರ ಸ್ಥಗಿತವಾಗಿರುವುದರ ಬಗ್ಗೆ ವರದಿಯಾಗಿಲ್ಲ, ಎಂದಿನಂತೆ ಬಸ್ ಸಂಚಾರವಿದ್ದು, ಅನಾಕೂಲಗಳು ಆಗಿಲ್ಲ.

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.