ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.

27 Feb 2026
ರಾಜ್ಯ

ರಾಜ್ಯದ 31 ಜಿಲ್ಲೆಗಳನ್ನು ಒಳಗೊಂಡ ಪತ್ರಕರ್ತರ ಸಮಸ್ಯೆ ಕುರಿತಂತೆ ಕಾರ್ಯ ಚಟುವಟಿಕೆ ನಡೆಸುತ್ತಿರುವ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಪತ್ರಕರ್ತರ ಸಮಸ್ಯೆ ಕುರಿತಂತೆ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಸಮ್ಮುಖದಲ್ಲಿ ವಿಧಾನ ಸೌಧದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.


ಸಂಘದ ರಾಜ್ಯಾಧ್ಯಕ್ಷ ಜಿ ಎಂ ರಾಜಶೇಖರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಿ, ನಗರ, ಗ್ರಾಮೀಣ ಪತ್ರಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಕೂಗು ಹಿಂದಿನಿಂದಲೂ ಕೇಳಿ ಬರುತ್ತಿದೆ. ಪತ್ರಕರ್ತರ ಸಮೂಹ ಮಾಧ್ಯಮಗಳ ಹೊರಗನ್ನು,ಅದರ ಮಹತ್ವವನ್ನು ಅರಿತವರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸಂಘವು ಒತ್ತಾಯ ಮಾಡಿದೆ.


ರಾಜ್ಯ ಸರಕಾರದಿಂದ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ನಗರ, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಸರಕಾರ ನೀಡಿದರು, ಸಂಬಂಧ ಪಟ್ಟ ಇಲಾಖೆಯ ಮಾನ ದಂಡದಿಂದ ನೈಜ ಪತ್ರಕರ್ತರು ಸೌಲಭ್ಯ ವಂಚಿತರಾಗಿದ್ದಾರೆ.


ಆರ್ ಎನ್ ಐ ಹೊಂದಿರುವ ಪತ್ರಿಕೆಗಳು ಹಾಗೂ ನೈಜ ಪತ್ರಕರ್ತರಿಗೆ ಆಯಾಯ ಜಿಲ್ಲೆಗಳ ವಾರ್ತಾ ಅಧಿಕಾರಿಗಳಿಂದ ಮಾಹಿತಿ ಪಡೆದು ಸೌಲಭ್ಯ ಒದಗಿಸಲು ಒತ್ತಾಯ ಮಾಡಿದರು.


ಮಾಧ್ಯಮ ಪಟ್ಟಿಗೆ ಸೇರ್ಪಡೆ ಕುರಿತಂತೆ ಕೆಲವು ನಿಲುವುಗಳನ್ನು ಸಡಿಲಗೊಳಿಸಿ ಕಾಲಕ್ಕೆ ಸರಿಯಾಗಿ ಸಭೆ ನಡೆಸಿ ಮಾಧ್ಯಮ ಪಟ್ಟಿಗೆ ಸೇರಿಸಲು ಒತ್ತಾಯಿಸುವುದರೊಂದಿಗೆ ಪತ್ರಕರ್ತರಿಗೆ ನಿವೃತ್ತಿ ವೇತನ ಕುರಿತಂತೆ ಬಹಳಷ್ಟು ಅರ್ಜಿಗಳು ಬಾಕಿ ಇದ್ದು, ಇದನ್ನು ಇತ್ಯರ್ಥ ಪಡಿಸುವಂತೆ ಸಂಘವು ಒತ್ತಾಯ ಮಾಡಿತು.


ಪತ್ರಿಕೋದ್ಯಮ ಕುರಿತಂತೆ ಬಜೆಟ್ ನಲ್ಲಿ ಹೆಚ್ಚು ಅನುದಾನ ನೀಡುವಂತೆ ರಾಜ್ಯದ ಪತ್ರಕರ್ತರಿಗೆ ವಿವಿಧ ಸೌಲಭ್ಯ ಒದಗಿಸುವಂತೆ ಬೇಡಿಕೆ ಇಡಲಾಯಿತು.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ , ಪತ್ರಕರ್ತರಿಗೆ ಪೂರಕವಾಗಿರುವ ಇಲಾಖೆಗಳಲ್ಲಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಇನ್ನಿತರ ಸರಕಾರಿ ಕಾರ್ಯಕ್ರಮಗಳಿಗೆ ಸುದ್ದಿಗೆ ತೆರಳಲು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಹನ ಕೊರತೆ ಇದ್ದು, ಈ ಸೌಲಭ್ಯ ನೀಡುವಂತೆ ಒತ್ತಾಯಿಸಿ ಹಾಗೂ ಸಂಬಂಧ ಪಟ್ಟ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಬಹಳಷ್ಟು ಇದ್ದು ಸಿಬ್ಬಂದಿಗಳ ನೇಮಕ ಮಾಡುವಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಒತ್ತಾಯ ಮಾಡಿದೆ.


ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಟಿ ಪಿ ಕೃಷ್ಣನ್, ರಾಜ್ಯ ಕಾರ್ಯದರ್ಶಿ ವಸಂತ್ ಕುಮಾರ್, ಕೋಶಾಧಿಕಾರಿ ಮಂಜುನಾಥ್, ಸಮಿತಿ ಸದಸ್ಯ ಚಂದ್ರಶೇಖರ ಹಾಲಪ್ಪ ಭಾಗವಹಿಸಿದ್ದರು.

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.