ಉಡುಪಿ:ಕಾರ್ಕಳದಲ್ಲಿ ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಸುನೀಲ್ ಕುಮಾರ್, ರಾಜ್ಯದಲ್ಲಿರುವುದು ದಪ್ಪ ಚರ್ಮದ ಎಮ್ಮೆ ಚರ್ಮದ ಸರ್ಕಾರ, ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರಕಾರ. 22 ಲಕ್ಷ ರೇಷನ್ ಕಾರ್ಡ್, 12 ಲಕ್ಷ ಬಗರ್ ಹುಕುಂ ಜಮೀನು ತಿರಸ್ಕಾರ ಮಾಡಲು ಹೊರಡಿದೆ.
ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಆರ್ಭಟ ಮಾಡುತ್ತಿದೆ. ಮೈಕ್ರೋ ಫೈನಾನ್ಸ್ ಗೆ ಕಡಿವಾಣ ಹಾಕುವ ಕೆಲಸವನ್ನು ಮಾಡುತ್ತಿಲ್ಲ. ರಾಜ್ಯದಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಯಾವುದೇ ವಸ್ತುಗಳು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಣ ಚುನಾವಣೆಗಾಗಿ ಹೈಕಮಾಂಡ್‌ಗೆ ಹೋಗಿದೆ ಎಂಬ ಕಾರಣಕ್ಕೆ ಸಾಫ್ಟ್ ಕಾರ್ನರ್ ತೋರಲಾಗಿದೆ. ಅಬಕಾರಿ ಇಲಾಖೆ ಹಣ ದೆಹಲಿ, ಮಹಾರಾಷ್ಟ್ರ ಮತ್ತು ಕೇಂದ್ರದ ಚುನಾವಣೆಗೆ ರವಾನೆಯಾಗಿದೆ. ಈ ಕಾರಣಕ್ಕೆ ತನಿಖೆಯನ್ನು ಬಹಳ ಮಂದಗತಿಯಲ್ಲಿ ಮಾಡುತ್ತಿದೆ ಎಂದು ಆರೋಪಿಸಿದರು.
ಸಂಸದ ಕೋಟ ಶ್ರೀನಿವಾಸ್ ಪೂಜಾರಿ.
ಬಜೆಟ್ ಬಗ್ಗೆ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳು ಟೀಕಿಸುವುದು ಹೊಸದಲ್ಲ.
ಆದರೆ ಇಂತಹ ಅದ್ಭುತ ಬಜೆಟ್ ನಲ್ಲಿ ರಾಜ್ಯಕ್ಕೆ ಅಥವಾ ದೇಶಕ್ಕೆ ಯಾವ ವಿಚಾರದಲ್ಲಿ ತೊಡಕುಂಟಾಗಿದೆ ಎಂಬುದನ್ನು ಕಾಂಗ್ರೆಸ್ ಪಕ್ಷವು ಸ್ಪಷ್ಟಪಡಿಸಲಿ.
ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಸಹಕರಿಸಲಿ ಎಂದು ಲೋಕಸಭಾ ಸಚೇತಕರು ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದ ಯೋಜನೆಗಳನ್ನು ತಡೆ ಹಿಡಿಯುವಲ್ಲಿ ಪರಿಣಾಮಕಾರಿ ಕೆಲಸ ಮಾಡುತ್ತಿರುವುದು ನಮ್ಮ ಗಮನದಲ್ಲಿದೆ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರವು 6000 ನೀಡಿದರೆ ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ 4000 ನೀಡಿತ್ತು. ಒಟ್ಟು 10,000 ರೂಪಾಯಿ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ರೈತರ ಕೈ ಸೇರುತ್ತಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮರುದಿನವೇ 4000 ರೂಪಾಯಿ ರೈತರಿಗೆ ನೀಡುತ್ತಿದ್ದ ಯೋಜನೆಯನ್ನು ರದ್ದುಗೊಳಿಸಿತ್ತು. ಈ ಮೂಲಕ ರೈತರಿಗೆ ಅನ್ಯಾಯ ಮಾಡಿದ್ದು ರಾಜ್ಯ ಕಾಂಗ್ರೆಸ್ ಅಲ್ಲವೇ? ಎಂದು ಸಂಸದರು ಪ್ರಶ್ನಿಸಿದ್ದಾರೆ.
ಕುಶಲ ಕರ್ಮಿಗಳಿಗೆ ಉಪಯೋಗವಾಗುವಂತಹ ವಿಶ್ವಕರ್ಮ ಯೋಜನೆ ಆಗಿರಬಹುದು, ಮುದ್ರಾ ಯೋಜನೆ ಆಗಿರಬಹುದು ಅಥವಾ ಆಯುಷ್ಮಾನ್ ಯೋಜನೆಗಳನ್ನು ಕೂಡಾ ಪರಿಣಾಮಕಾರಿ ಬಳಕೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಉದಾಸೀನ ತೋರುತ್ತಿರುವುದು ರಾಜ್ಯದ ಜನತೆಗೆ ಗೊತ್ತಿಲ್ಲದೇನಲ್ಲ. ಇಂತಹ ಉತ್ತಮ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಸರ್ಕಾರವು ಕೆಲಸ ಮಾಡುವುದನ್ನು ಬಿಟ್ಟು ಜನರಿಗೆ ಕೇವಲ ರಾಜಕೀಯ ದ್ವೇಷಕ್ಕಾಗಿ ಜನರಿಗೆ ಮೋಸ ಮಾಡುವುದು ಎಷ್ಟು ಸರಿ? ಮೊದಲು ರಾಜ್ಯ ಸರ್ಕಾರವು ತಮ್ಮಲ್ಲಿ ಆಗುವಂತಹ ಲೋಪ ದೋಷಗಳನ್ನು ಸರಿಪಡಿಸಿಕೊಂಡು ನಂತರ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡಲಿ ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್, ಬಿಜೆಪಿ ಮುಖಂಡರಾದ ಬೋಳ ಪ್ರಭಾಕರ್ ಕಾಮತ್, ರೇಶ್ಮಾ ಉದಯ ಶೆಟ್ಟಿ, ಮಹಾವೀರ ಹೆಗ್ಡೆ, ಬೋಳ ಪ್ರಭಾಕರ್ ಕಾಮತ್, ಮಣಿರಾಜ್ ಶೆಟ್ಟಿ, ಮಟ್ಟಾರು ರತ್ನಾಕರ್ ಹೆಗ್ಡೆ, ಮುಟ್ಲುಪಾಡಿ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.








