ಸರಕಾರ Vs ರಾಜಭವನ ನಡುವೆ ಸಮರ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ತಣ್ಣೀರು.!

07 Feb 2025
ರಾಜ್ಯ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆಯಾಗಿದೆ.ಸಾಲ ವಸೂಲಾತಿ ನೆಪದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.


ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಗ್ರಾಮಸ್ಥರು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ರೋಸಿ ಹೋಗಿ ಊರನ್ನೇ ತ್ಯಜಿಸಿದ್ದಾರೆ. ಇನ್ನು ಕೆಲವು ಗ್ರಾಮಗಳಲ್ಲಿ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲವು ಗ್ರಾಮಗಳಲ್ಲಿ ಮೈಕ್ರೋ ಫೈನಾನ್ಸ್ನವರು ರಾತ್ರೋರಾತ್ರಿ ಮನೆ ಕಾಲಿ ಮಾಡಿಸಿದ್ದಾರೆ. ಈ ಕಿರುಕುಳದಿಂದ ಬೇಸತ್ತ ಜನರು ಮೈಕ್ರೋ ಫೈನಾನ್ಸ್ನವರ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.


ಇವೆಲ್ಲವನ್ನು ಕಂಡ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ನವರ ಕಿರುಕುಳಕ್ಕೆ ಬ್ರೇಕ್ ಹಾಕಲು ಸುಗ್ರಿವಾಜ್ಞೆ ಮೂಲಕ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈ ಸಂಬಂಧ ಹೊಸ ನಿಮಯಗಳನ್ನು ರಚಿಸಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಕರಡನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿತ್ತು. ಆದರೆ, ರಾಜ್ಯಪಾಲರು ಹಲವು ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದಾರೆ.


ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್‌ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕು. ವಿಧಾನ ಮಂಡಲ ಅಧಿವೇಶನ ಹತ್ತಿರದಲ್ಲೇ ಇದೆ. ಅಲ್ಲೇ ಮಸೂದೆ ಮಂಡನೆ ಮಾಡಿ, ಚರ್ಚೆ ಬಳಿಕ ಅಂಗೀಕಾರ ಮಾಡಬಹುದು ಎಂದು ರಾಜ್ಯಪಾಲರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.


ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ‌ ಹೇಗೆ ಹಾಕುತ್ತೀರಾ? ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಿ. ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ 10 ವರ್ಷ ವಿಧಿಸಲಾಗಿದೆ, ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ, ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರೋದಕ್ಕೆ ಮತ್ತೊಂದು ಕಾನೂನಿನ ಅಗತ್ಯತೆ ಕಾಣ್ತಿಲ್ಲ. ಆದ್ದರಿಂದ ಬಜೆಟ್ ಅಧಿವೇಶನದ ಹತ್ತಿರವಾಗ್ತಿರುವಾಗ ಸದನದಲ್ಲಿ ‌ಮಸೂದೆ ಮಂಡನೆ ಮಾಡಿ ಸಾದಕಬಾಧಕ ಚರ್ಚಿಸಿ ಎಂದು ತಿಳಿವಳಿಕೆ ನೀಡಿದ್ದಾರೆ.

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.