ಬೆಂಗಳೂರು ಜೂನ್ 4: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿ ಏಳು ಜನ ಮೃತಪಟ್ಟಿದ್ದಾರೆ , 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಕ್ರೀಡಾಂಗಣದ ಬಳಿ ನೂಕು ನುಗ್ಗಲು ಉಂಟಾಗಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಈ ವೇಳೆ ಕಾಲ್ತುಳಿತ ಉಂಟಾಗಿ, ಏಳು ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.
ಕಾಲ್ತುಳಿತದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಆರ್‌ಸಿಬಿ ವಿಜಯೋತ್ಸವ ಪರೇಡ್ ಭದ್ರತಾ ದೃಷ್ಟಿಯಿಂದ ಕೈಬಿಡಲಾಗಿತ್ತು. ಬದಲಾಗಿ ಚಿನ್ನಸ್ವಾಮಿಯಂ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಿಸಲು ಅನುಮತಿ ನೀಡಲಾಗಿತ್ತು. ವಿಧಾನಸೌಧದ ಬಳಿ ತಂಡದ ಸದಸ್ಯರಿಗೆ ಸನ್ಮಾನಿಸಿ, ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. ಆದರೆ, ಸಾವಿರಾರು ಅಭಿಮಾನಿಗಳು ಸ್ಟೇಡಿಯಂನತ್ತ ಬರುತ್ತಿರುವುದರಿಂದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುವಂತಾಗಿದೆ.








