ಹಾಸನ ಜಿಲ್ಲಾಧಿಕಾರಿ. ಮಳೆಯಿಂದ ಆಗಬಹುದಾದ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ..

24 Jun 2025
ರಾಜ್ಯ

ಹಾಸನ: ಜೂ23:ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದ ಅವರು ರೈತರ ಆತ್ಮಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವ ನಿಟ್ಟಿನಲ್ಲಿ ಪರಿಶೀಲಿಸುವಂತೆ ಸೂಚಿಸಿದರಲ್ಲದೆ ತಕ್ಷಣ ಪರಿಹಾರ ನೀಡಲು ಕ್ರಮವಹಿಸಿ

ಹಾವು ಕಡಿತ ಹಾಗೂ ಆಕಸ್ಮಿಕ ಸಾವು ಕುರಿತು ಪ್ರತ್ಯೇಕ ವರದಿ ನೀಡುವಂತೆ ನಿರ್ದೇಶನ ನೀಡಿದರಲ್ಲದೆ ಪರಿಹಾರ ವಿತರಣೆಗೆ ಕ್ರಮವಹಿಸುವಂತೆ ಸೂಚಿಸಿದರು..

ಮಳೆಯಿಂದ ಹಾನಿಯಾಗಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಿರಂತರವಾಗಿ ಬೀಳುವ ಮಳೆಯಿಂದ ಹುಲ್ಲಿನ ಬಣವೆ ನೆನೆಯುವುದರಿಂದ ಫಂಗಸ್ ಆಗುವುದರಿಂದ ಜಾನುವಾರುಗಳು ತಿನ್ನಲು ಯೋಗ್ಯವಾಗಿರುವುದಿಲ್ಲ ಈ ನಿಟ್ಟಿನಲ್ಲಿ ನಿಗಾವಹಿಸಲು ಅಧಿಕಾರಿಗಳಿಗೆ

ದೊಡ್ಡ ಜಾನುವಾರು ಸಣ್ಣ ಜಾನುವಾರುಗಳು ಆಕಸ್ಮಿಕವಾಗಿ ಸಾವು ಸಂಭವಿಸಿದಾಗ ಪರಿಹಾರ ನೀಡಲು ಕ್ರಮಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.


ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಅಗ್ನಿಶಾಮಕ ಇಲಾಖೆಗೆ ಅಗತ್ಯ ವಾಹನ ಖರೀದಿಗಾಗಿ ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ

ನಗರ ಪ್ರದೇಶಗಳಲ್ಲಿ ರಾಜಕಾಲುವೆಗಳು ಮತ್ತು ಚರಂಡಿಗಳನ್ನು ಸ್ವಚ್ಚತೆಗೆ ಕ್ರಮವಹಿಸಿ ಮಳೆಯ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸುವಂತೆ ಹಾಗೂ

ಕೆರೆಕಟ್ಟೆ, ಗೋಕಟ್ಟೆ, ಬೃಹತ್ ನೀರಾವರಿಗಳ ಬಗ್ಗೆ ಪ್ರತ್ಯೇಕವಾಗಿ ಪಟ್ಟಿ ತಯಾರಿಸಿ ನೀಡುವಂತೆ ಸೂಚಿಸಿದ ಅವರು ನಗರದ ಸ್ವಚ್ಚತೆಗೆ ಹೆಚ್ಚು ಗಮನಹರಿಸಿ ನೀರು ನಿಲ್ಲದಂತೆ ಎಚ್ಚರವಹಿಸಿ ಎಂದ ಅವರು ಪ್ಲಾಸ್ಟಿಕ್ ರಸ್ತೆಗಳಲ್ಲಿ ಬಿಸಾಡುವುದನ್ನು ತಪ್ಪಿಸಲು ಕ್ರಮವಹಿಸಿ

ಮಳೆಗಾಳಿಗೆ ಬೀಳುವಂತಿರುವ ವಿದ್ಯುತ್ ಕಂಬಗಳು ಹಾಗೂ ಜೊತಾಡುವ ವಿದ್ಯುತ್ ತಂತಿಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರಲ್ಲದೆ, ವಿದ್ಯುತ್ ಕಂಬಗಳಿಂದ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ತೆಗೆದುಕೊಂಡು ಬಳಕೆ ಮಾಡಲಾಗುತ್ತಿದೆಯೇ ಗಮನಹರಿಸಿ ಯಾವುದೇ ಅವಘಡ ಸಂಭವಿಸಿದಲ್ಲಿ ಹೊಣೆಗಾರಾರು ಯಾರು ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಿ

ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಗಮನಹರಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.


ನಾಯಿ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಆಂದೋಲನ ರೀತಿಯಲ್ಲಿ ಸಂತಾನ ಹರಣ ಶಸ್ತçಚಿಕಿತ್ಸೆ ಮಾಡಿದಲ್ಲಿ ಮುಂದಿನ ಮೂರು ನಾಲ್ಕು ವರ್ಷಗಳಲ್ಲಿ ನಾಯಿ ಹಾವಳಿಯನ್ನು ನಿಯಂತ್ರಿಸ ಬಹುದಾಗಿದೆ ಎಂದರು.

ಶಾಲಾ ಆವರಣ, ಆಸ್ಪತ್ರೆ ಆವರಣ ಹಾಗೂ ಮತ್ತಿತರ ಕಡೆಗಳಲ್ಲಿ ಮರದ ಕೊಂಬೆಗಳು ವಿದ್ಯುತ್ ತಂತಿಗೆ ತಾಗುವಂತಿದ್ದರೆ ಅವುಗಳನ್ನು ಕತ್ತರಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ತಿಳಿಸದರು.

ಯಾವುದೇ ಸಮಸ್ಯೆ ಇದ್ದರೂ ತಕ್ಷಣ ನನ್ನ ಗಮನಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ತಿಳಿಸಿದರು.


ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.



ಹಾಸನ.ವರದಿ:

ಶಂಕರೇಗೌಡ ಹುಲಿಕೆರೆ.

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.