ಸರ್ಕಾರ ಇಂದಿರಾ ಕಿಟ್ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್ ವಿತರಣೆಗೆ ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ಅವರು ತಿಳಿಸಿದ್ದಾರೆ.
ಅರಕಲಗೂಡಿನ ತಾಲೂಕ್ ಪಂಚಾಯಿತಿ ಸಭಾಂಗಣದಲ್ಲಿಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಸಭೆ ನಡೆಸಿ ಮಾತನಾಡಿದ ಅವರು ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ ಎಂದರು.
ಅರಕಲಗೂಡು ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹ ಲಕ್ಷ್ಮಿಯ ಹಾಗೂ ಯುವನಿಧಿ ಯೋಜನೆಗೆ ಅರಕಲಗೂಡು ತಾಲ್ಲೂಕು 99% ಗುರಿ ಸಾಧಿಸಿದೆ ಎಂದು ಪುಷ್ಪ ಅಮರನಾಥ್ ಅವರು ತಿಳಿಸಿದರು.
ಬಸ್ ನಿಲ್ದಾಣದ ಸ್ವಚ್ಚತೆ ಕಾಯ್ದುಕೊಳ್ಳಬೇಕು, ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಅಗತ್ಯವಿದ್ದಲ್ಲಿ ಹೆಚ್ಚಿನ ಬಸ್ಸುಗಳನ್ನು ನಿಯೋಜಿಸುವಂತೆ ತಿಳಿಸಿದರು.
ಅರಕಲಗೂಡು ತಾಲ್ಲೂಕಿನಲ್ಲಿ ಶೇ 99 ರಷ್ಟು ಗುರಿ ಸಾದಿಸಿರುವುದಕ್ಕೆ ಅಧಿಕಾರಿಗಳಿಗೆ ಮತ್ತು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಿಗೆ ಅಭಿನಂದನೆಯನ್ನು ತಿಳಿಸಿದರು.
ಈ ವೇಳೆಯಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅರಕಲಗೂಡು ತಾಲೂಕ್ ಅಧ್ಯಕ್ಷರಾದ ಶ್ರೀಧರ್ ಗೌಡ, ತಹಶೀಲ್ದಾರ್ ಸೌಮ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಹಾಸನ ವರದಿ
ಶಂಕರೇ ಗೌಡ ಹುಲಿಕೆರೆ.








